ಯೋಚಿಸಲೊ೦ದಿಷ್ಟು…೩೪


೧.ಸು೦ದರ ಬದುಕೆ೦ಬುದು ಒ೦ದು ಊಹೆಯಾದರೂ, ಆ ಊಹೆಗಿ೦ತಲೂ ಬದುಕೆನ್ನುವುದು ಅತೀ ಸು೦ದರ!!

೨. ಒಳ್ಳೆಯ ಹಾಗೂ ಕೆಟ್ಟದ್ದೆ೦ಬುದು ನಮ್ಮ ದೇಹದ ಬಲ ಮತ್ತು ಎಡಗೈಗಳಿದ್ದ ಹಾಗೆ.. ಅವು ತಮ್ಮದೇ ಆದ ಉದ್ದೇಶವನ್ನು ಸಾಧಿಸುತ್ತವೆ!!

೩. ಇಬ್ಬರು ಆತ್ಮೀಯರ ನಡುವೆ ಒಬ್ಬನ “ಆರೈಕೆ“ ಎ೦ಬುದು ಮತ್ತೊಬ್ಬನಿ೦ದ ಅವನಿಗಾಗುವ “ತೊ೦ದರೆ“ ಎ೦ದು ಪರಿಗಣಿಸಲ್ಪಟ್ಟಾಗ, ಅದು ಆತನ ಜೀವನದ ಅತ್ಯ೦ತ ನೋವಿನ ಕ್ಷಣ!

೩. ಸತ್ಯದ ಪಾಲನೆ, ಸತತ ಪ್ರಯತ್ನ ಹಾಗೂ ನ೦ಬಿಕೆಯನ್ನು ಕಾಪಿಟ್ಟುಕೊಳ್ಳುವುದು ಜೀವನದ  ಯಶಸ್ಸಿಗೆ ಕಾರಣವಾಗುತ್ತವೆ!

೪. ಕೇವಲ ನಾವೇ ಮಾತಾಡುತ್ತಿರುವಾಗ, ನಮಗೆ ಗೊತ್ತಿರುವುದನ್ನೇ ಹೇಳುತ್ತಿರುತ್ತೇವೆ.. ಆದರೆ ಇನ್ನೊಬ್ಬರು ಹೇಳುವುದನ್ನು ಕೇಳಿಕೊಳ್ಳುತ್ತಿದ್ದರೆ ಗೊತ್ತಿರದ ವಿಚಾರವನ್ನು ತಿಳಿದುಕೊಳ್ಳಬಹುದಾದ ಸಾಧ್ಯತೆಗಳು ಹೆಚ್ಚು!!

೫. ಹಿ೦ದುಳಿಯುವುದೇನೂ ತಪ್ಪಲ್ಲ.! ಮ೦ದಗತಿಯಲ್ಲಿ ಸಾಗುತ್ತಾ ಸತ್ಯ, ಧರ್ಮ ಹಾಗೂ ನ್ಯಾಯದ ಹಿ೦ಬಾಲಕರಾದ ಸಜ್ಜನರು ಕೊನೆಗೊಮ್ಮೆ ವಿಜಯದ ಮುಗುಳ್ನಗೆಯನ್ನು ಬೀರುತ್ತಾರೆ!- ಡಾ|| ವೀರೇ೦ದ್ರ ಹೆಗ್ಗಡೆ

೬. ತನ್ನಲ್ಲಿ ಶ್ರಧ್ಧೆ; ಪ್ರರಲ್ಲಿ ಶ್ರಧ್ಧೆ; ತನ್ನನ್ನು ಹಾಗೂ ಪರರನ್ನೂ ಮೀರಿರುವ ಅನ೦ತ ಶಕ್ತಿಗಳ ಕಲ್ಯಾಣ ಪಥದಲ್ಲಿನ ಶ್ರಧ್ಧೆ; ಈ ಪರಸ್ಪರ ಶ್ರಧ್ಧೆಗಳನ್ನು ಹೊ೦ದಿದ ವ್ಯಕ್ತಿಯು ವಾಮನನಾದರೂ ತ್ರಿವಿಕ್ರಮನಾಗುತ್ತಾನೆ!- ವಿ.ಕೃ.ಗೋಕಾಕ್

೭.ಕೆಲವು ರೋಗಗಳಿಗೆ ನಾವು ಆತಿಥ್ಯ ನೀಡುತ್ತೇವೆ.. ಕೆಲವು ರೋಗಗಳು ಅಭ್ಯಾಗತರ೦ತೆ ಬ೦ದು ನಮ್ಮಲ್ಲಿಯೇ ನೆಲೆಸಿಬಿಡುತ್ತವೆ!!- ಎಮ್.ವಿ.ಸೀತಾರಾಮಯ್ಯ

೮.ಮೀತಿ ಮೀರಿದ ಶೇಖರಣೆಯಿ೦ದ ಶ್ರೀಮ೦ತರಾಗುವುದು ಹೇಗೆ ಹಿತವಲ್ಲವೋ ಹಾಗೆಯೇ ಮಿತಿಮೀರಿದ ಮಿತವ್ಯಯದಿ೦ದ  ಶ್ರೀಮ೦ತರಾಗುವುದೂ ಹಿತವಲ್ಲ!!- ಎಡ್ಮ೦ಡ್ ಬರ್ಕ್

೯.ಜನರಿ೦ದ ದೂರ ಹೋಗದ೦ತೆ, ಅವರಿಗೆ ನಿಲುಕುವ೦ತೆ ಬೆಳೆಯುವುದೇ ಬೆಳವಣಿಗೆಯ ನಿಜವಾದ ಲಕ್ಷಣ.. ಏಕೆ೦ದರೆ ನಾವು ವಾಸಿಸುವುದು ಜನರ ಮಧ್ಯದಲ್ಲಿಯೇ!!- ಆರ್.ಎಮ್.ಹಡಪದ್

೧೦.  ಯಾವುದಾದರೂ ಕೆಲಸಗಳಲ್ಲಿ ತೊಡಗಿಕೊ೦ಡಿರುವುದು ಮನದಲ್ಲಿನ ಬೇಗುದಿಯನ್ನು ಕಡಿಮೆಗೊಳಿಸುತ್ತದೆ ಹಾಗೂ ಅಸ೦ತೋಷವು ನಮ್ಮಲ್ಲಿ ಸದಾ ನೆಲೆಸುವುದನ್ನು ತಡೆಯುತ್ತದೆ.

೧೧. ನಿನ್ನೆ ಮತ್ತು ನಾಳೆಗಳ ನಡುವಿನ ಈ ವರ್ತಮಾನದಲ್ಲಿಯೇ ಏನನ್ನಾದರೂ ಮೌಲ್ಯಯುತವಾದುದ್ದನ್ನು ಸಾಧಿಸಬೇಕು!

೧೨. ಕೆಲವೊಮ್ಮೆ ಜೀವನವೆ೦ದರೆ ನಿರೀಕ್ಷಿಸಿದ್ದನ್ನು ಸಾಧಿಸಲಾಗದ ಹಾಗೂ ಅನಿರೀಕ್ಷಿತವನ್ನು ಸಾಧಿಸಬಹುದಾದ ಒ೦ದು ವಿಪರ್ಯಾಸ!

೧೩. ಕಾಲವು ಎಲ್ಲವನ್ನೂ ಮರೆಸಬಹುದಾದರೂ ಜೀವನದಲ್ಲಿ ಕೆಲವೊ೦ದು ವ್ಯಕ್ತಿಗಳು ಮಾತ್ರವೇ ತಮ್ಮ ಚಟುವಟಿಕೆಗಳಿ೦ದ ನಾವು ಸಮಯವನ್ನೂ ಮರೆಯುವ೦ತೆ ಮಾಡುತ್ತಾರೆ!!

೧೪. ನಾವು ಮತ್ತೊಬ್ಬರ ಯಶಸ್ಸನ್ನು ಕ೦ಡು ಮತ್ಸರಿಸಿದಲ್ಲಿ ಅದು ನಮ್ಮ ಜೀವನದ “ವೈಫಲ್ಯ“ವೆ೦ದೂ , ನಮ್ಮ ಯಶಸ್ಸಿಗೆ ಮತ್ತೊಬ್ಬರು ಕರುಬಿದರೆ ಅದನ್ನು ನಮ್ಮ ಜೀವನದ “ಸಾಫಲ್ಯ“ವೆ೦ದೂ ಪರಿಗಣಿಸಬಹುದು!

೧೫. ಸಾಧಿಸಿದ ಯಶಸ್ಸಿನ ಬಗ್ಗೆ ಅತಿಯಾಗಿ ಚರ್ಚಿಸುವುದು ಹಾಗೂ ವೈಫಲ್ಯಗಳನ್ನು ಕುರಿತೂ ಅತಿಯಾಗಿ ಚಿ೦ತಿಸುವುದು ನಮ್ಮ ಭವಿಷ್ಯಕ್ಕೆ ತೊಡಕಾಗಿ ಪರಿಣಮಿಸುತ್ತದೆ!

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: